IPL 2025ರ ಮೆಗಾ ಹರಾಜು ಮುಕ್ತಾಯ ಆಗಿದ್ದು, ಈ ಬಾರಿ ಪ್ರಾಂಚೈಸಿ ಸ್ವಲ್ಪ ಎಡವಿರೋದು ಗೊತ್ತಾಗಿದೆ. ಪ್ರಮುಖ ಆಟಗಾರರನ್ನೇ ಪ್ರಾಂಚೈಸಿ ಕೈ ಬಿಟ್ಟಿದ್ದು, ಈ ಬಾರಿ ಕಪ್ ನಮ್ದಲ್ಲ ಅಂತಿದ್ದಾರೆ ಫ್ಯಾನ್ಸ್.
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಪೂರ್ಣಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ರಿಲೀಸ್ ಮಾಡಿದ್ದ ಗ್ಲೆನ್ ಮ್ಯಾಕ್ಸ್ವೆಲ್ ಅವರು ಪಂಜಾಬ್ ತಂಡದ ಪಾಲಾಗಿದ್ದಾರೆ.
GT ದೇವೇಗೌಡರು,ಹೆಚ್ ಡಿಕೆ ಜೊತೆ ಮಾತಾಡಿದ್ರೆ ಎಲ್ಲವೂ ಸರಿ ಆಗಲಿದೆ: ಸುರೇಶ್ ಬಾಬು!
ಪಂಜಾಬ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಮ್ಯಾಕ್ಸಿ ಖರೀದಿಗೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಪಂಜಾಬ್ ಕಿಂಗ್ಸ್ 4.20 ಕೋಟಿ ನೀಡಿ ಮ್ಯಾಕ್ಸಿ ಅವರನ್ನು ಖರೀದಿಸಿದೆ. ಆರ್ಟಿಎಂ ಕಾರ್ಡ್ ಬಳಸಿ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಆರ್ಸಿಬಿ ಉಳಿಸಿಕೊಳ್ಳಬಹುದಿತ್ತು. ಆದರೆ, ಮ್ಯಾಕ್ಸಿ ಖರೀದಿಗೆ ಆರ್ಸಿಬಿ ಆಸಕ್ತಿಯೇ ತೋರಲಿಲ್ಲ.
ಮುಂದಿನ ಸೀಸನ್ಗಾಗಿ ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡಿದೆ. ಉತ್ತಮ ಪ್ರದರ್ಶನ ನೀಡದ ದುಬಾರಿ ಆಟಗಾರರನ್ನೇ ಕೈ ಬಿಟ್ಟಿದೆ. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಆರ್ಸಿಬಿ ರಿಲೀಸ್ ಮಾಡಿದೆ. 2021ರ ಹರಾಜಿನಲ್ಲಿ ಮ್ಯಾಕ್ಸ್ವೆಲ್ ಅವರನ್ನು 14.25 ಕೋಟಿ ರೂಪಾಯಿ ನೀಡಿ ಆರ್ಸಿಬಿ ಖರೀದಿ ಮಾಡಿತ್ತು. 2023ರ ಐಪಿಎಲ್ನಲ್ಲಿ 400 ರನ್ ಗಳಿಸಿದ್ದ ಮ್ಯಾಕ್ಸಿ ಕಳೆದ ಸೀಸನ್ 2024ರ ಐಪಿಎಲ್ನಲ್ಲಿ ಕೇವಲ 52 ರನ್ ಗಳಸಿದರು. ಈ ಮೂಲಕ ಆರ್ಸಿಬಿಗೆ ಮ್ಯಾಕ್ಸ್ವೆಲ್ ದೊಡ್ಡ ತಲೆನೋವಾಗಿ ಪರಿಣಮಿಸಿದ್ರು.
2021ರಿಂದ 2023ರವರೆಗೆ ಆರ್ಸಿಬಿ ಪರ ಮ್ಯಾಕ್ಸಿ ಅದ್ಭುತ ಆಲ್ರೌಂಡರ್ ಆಟವನ್ನಾಡಿದ್ದರು. 2021ರಲ್ಲಿ ಮ್ಯಾಕ್ಸ್ವೆಲ್ 513, 2022ರಲ್ಲಿ 301, 2023ರಕ್ಕು 400 ರನ್ ಬಾರಿಸಿದ್ದರು. 2024ರಲ್ಲಿ ಕೇವಲ 52 ರನ್ ಮಾತ್ರ ಬಾರಿಸಿದ್ದಾರೆ. ಆಡಿರುವ 10 ಪಂದ್ಯಗಳಲ್ಲೂ ಮ್ಯಾಕ್ಸ್ವೆಲ್ ಕೆಟ್ಟ ಪ್ರದರ್ಶನ ನೀಡಿ ಆರ್ಸಿಬಿ ಮ್ಯಾನೇಜ್ಮೆಂಟ್ನ ಕೆಂಗಣ್ಣಿಗೆ ಗುರಿಯಾಗಿದ್ರು