ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ ಹಾಗೂ ಸಂಜು ಸ್ಯಾಮ್ಸನ್ ನೇತೃತ್ವದ ಆರ್ಆರ್ ತಂಡಗಳು ಎದುರಾಗುತ್ತಿವೆ.
ರಾಜಸ್ಥಾನ್ ರಾಯಲ್ಸ್ ತಂಡವು ಹ್ಯಾಟ್ರಿಕ್ ಗೆಲುವಿನೊಂದಿಗೆ ಬೀಗುತ್ತಿದ್ದು, ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಬೆಂಗಳೂರು ತಂಡಕ್ಕೆ ಗೆಲುವು ಅನಿವಾರ್ಯವಾಗಿದ್ದು, ಸ್ಯಾಮ್ಸನ್ ಪಡೆಯನ್ನು ಅವರದ್ದೇ ತವರಲ್ಲಿ ಮಣಿಸಬೇಕಾದ ಒತ್ತಡವೂ ಇದೆ. ಪಂದ್ಯದ ಸಂಪೂರ್ಣ ಅಪ್ಡೇಟ್ ಇಲ್ಲಿದೆ.
G Parameshwar: ಗೃಹ ಸಚಿವ ಪರಮೇಶ್ವರ್ ವಿರುದ್ಧ ಬಿಜೆಪಿ ದೂರು..! ಯಾಕೆ ಗೊತ್ತಾ..?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಕಳೆದ ಎರಡು ಪಂದ್ಯಗಳಲ್ಲಿ ತವರಿನಲ್ಲೇ ಎದುರಾಳಿಗೆ ಶರಣಾಗಿರುವ ಆರ್ಸಿಬಿ, ಈಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆದೆ. ಉಭಯ ತಂಡಗಳು ಏಪ್ರಿಲ್ 6ರಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಸೆಣಸಾಟಕ್ಕೆ ರೆಡಿಯಾಗಿವೆ. ಈ ಪಂದ್ಯಕ್ಕೆ ಆರ್ಸಿಬಿ ಸಂಭಾವ್ಯ ತಂಡ ಹೀಗಿದೆ.
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ಸುಯೇಶ್ ಪ್ರಭುದೇಸಾಯಿ, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರರ್, ವಿಲ್ ಜ್ಯಾಕ್ಸ್, ವೈಶಾಖ್ ವಿಜಯ್ಕುಮಾರ್, ಲಾಕಿ ಫರ್ಗ್ಯುಸನ್, ಮೊಹಮ್ಮದ್ ಸಿರಾಜ್, ಮಯಾಂಕ್ ಡಾಗರ್.