ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಪಂದ್ಯ ನಡೆಯುತ್ತಿದೆ.
ಮತದಾನಕ್ಕೆ ಸಜ್ಜಾಗಿದೆ ಬೆಂಗಳೂರು! ಸಖಿ ಮತಗಟ್ಟೆಗಳ ಸ್ಥಾಪನೆ ಮಾಡಿದ ಚುನಾವಣಾಯೋಗ
ಟಾಸ್ ಗೆದ್ದ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು ಐಪಿಎಲ್ 2024ರ 41ನೇ ಪಂದ್ಯ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಹೈವೋಲ್ಟೇಜ್ ಕದನದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗುತ್ತಿವೆ. ಹೈದರಾಬಾದ್ ಇದುವರೆಗೆ 7 ಪಂದ್ಯಗಳನ್ನು ಆಡಿದ್ದು, 5 ರಲ್ಲಿ ಗೆಲುವು ಸಾಧಿಸಿದೆ. ಹಾಗೆಯೇ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಆರ್ಸಿಬಿ 8 ಪಂದ್ಯಗಳಲ್ಲಿ 1 ರಲ್ಲಿ ಮಾತ್ರ ಗೆದ್ದಿದ್ದು, 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.