ಬೆಂಗಳೂರು: ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ಪ್ರಕಟಣೆ ಮಾಡಿದೆ.
Breaking News: ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷ
ಪಿಎಸ್ಐ ಮರುಪರೀಕ್ಷೆಯನ್ನು ಸ್ವತಂತ್ರ ಸಂಸ್ಥೆಯಿಂದ ನಡೆಸಲು ಹೈಕೋರ್ಟ್ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಪಿಎಸ್ಐ ಮರು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ಪ್ರಕಟಿಸಿದೆ. ಈ ಹಿಂದೆ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಈ ನೇಮಕಾತಿ ಸಂಬಂಧದ ಅಧಿಸೂಚನೆಯನ್ನು ರದ್ದುಪಡಿಸಿ, ನೂತನವಾಗಿ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಆರೋಪ ರಹಿತ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೇ ನ.10 ರಂದು ಹೈಕೋರ್ಟ್ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಮೂಲಕ ನ್ಯಾಯಾದೀಶ ಪಿ.ಎಸ್.ದಿನೇಶ್ ಕುಮಾರ್, ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿತ್ತು.