ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿನಾನು ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ. ನಾನು ಇನ್ನೂ ಕಾಂಗ್ರೆಸ್ ಸೇರ್ಪಡೆ ಆಗಿಲ್ಲ ಎಂದು ಮಾಜಿ ಸಚಿವ ಯೋಗೇಶ್ವರ್ ಪುತ್ರಿ ನಿಶಾ (Nisha Yogeshwar) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸದ್ಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಾನು ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ.
ನಾನು ಇನ್ನೂ ಕಾಂಗ್ರೆಸ್ ಸೇರ್ಪಡೆ ಆಗಿಲ್ಲ. ಮುಂದೆ ಕಾಂಗ್ರೆಸ್ ಸೇರ್ಪಡೆ ಆದ ಬಳಿ ಪಕ್ಷ ಕೊಡುವ ಜವಾಬ್ದಾರಿ ಸ್ವೀಕರಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಯ ಬಗ್ಗೆ ಯಾವುದೇ ಚಿಂತನೆ ಮಾಡಿಲ್ಲ. ಸಮಯ ಬಂದಾಗ ಎಲ್ಲದಕ್ಕೂ ಉತ್ತರ ಸಿಗುತ್ತದೆ ಎಂದು ಹೇಳಿದರು.
ಪಕ್ಷ ಸೇರ್ಪಡೆ ವಿಚಾರದ ಬಗ್ಗೆ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದೇನೆ. ಅದಕ್ಕೆ ಸಮಯ ಬೇಕು ಎಂದು ಅವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರುತ್ತೇನೆ. ಈ ಬಗ್ಗೆ ನಮ್ಮ ಮನೆಯಲ್ಲೂ ಚರ್ಚೆ ಆಗಿದ್ದು, ಮನೆಯವರ ಸಮ್ಮತಿಯಿಂದಲೇ ನಾನು ವೈಯಕ್ತಿಕ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದರು.