ದಾವಣಗೆರೆ:- ನಮ್ಮ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಮಯದಲ್ಲಿ 40 ಸಾವಿರ ಕೋಟಿ ಅವ್ಯವಹಾರ ಆಗಿದ್ರೆ ನಾನೆ ರಾಜೀನಾಮೆ ಕೊಡುತ್ತೇನೆ ಎಂದು ಮಾಜಿ ಸಚಿವ MP ರೇಣುಕಾಚಾರ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಶಾಸಕ ಯತ್ನಾಳ್ ಆರೋಪದಲ್ಲಿ ಯಾವುದೇ ಹುರಳಿಲ್ಲ. 40 ಸಾವಿರ ಕೋಟಿ ಅವ್ಯವಹಾರ ಆಗಿದ್ರೆ ನಾನೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲ್ ಹಾಕಿದರು.
ಕೋವಿಡ್ ನಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ 40 ಸಾವಿರ ಕೋಟಿ ಹಗರಣ ನಡೆದಿದೆ ಎಂದಿದ್ದಾರೆ. ಆಗ ಇವರು ಶಾಸಕರಾಗಿದ್ದರು. ನಾವು ಕೂಡ ಯಾವುದಕ್ಕೆ ಎಷ್ಟೆಷ್ಟು ಖರ್ಚಾಗಿದೆ ಎಂದು ಸದನದಲ್ಲಿಯೇ ದಾಖಲೆ ತೋರಿಸಿದ್ದೇವೆ. ಯತ್ನಾಳ ಆಗ ಯಾಕೆ ಹೇಳಲಿಲ್ಲ, ಈಗ ಆರೋಪ ಮಾಡುತ್ತಿದ್ದಾರೆ. ಇವರು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಬೇಕು. ವಿಜಯಪುರದಲ್ಲಿ ಪ್ರಭಾವಿ ಸಚಿವರ ಜೊತೆ ಒಪ್ಪಂದ ಆಗಿದೆ. ಈ ಸರ್ಕಾರದಲ್ಲಿ ಕೆಲಸ ಮಾಡಿಕೊಂಡು ಆರೋಪ ಮಾಡೋದು ಬಿಡಬೇಕು.
ದಾಖಲೆ ಸಮೇತ ಚರ್ಚೆಗೆ ಬನ್ನಿ ನಾನು ಬರ್ತೀನಿ ಎಂದು ಯತ್ನಾಳಗೆ ಎಂಪಿ ರೇಣುಕಾಚಾರ್ಯ ಸವಾಲ್ ಹಾಕಿದ್ದಾರೆ. ಕಾಂಗ್ರೆಸ್ ತುಘಲಕ್ ದರ್ಬಾರ್ ಸರ್ಕಾರವಾಗಿದೆ ಎಂದರು.