ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್ ಪೇರಿಸಿದೆ. ಇದೀಗ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 200 ವಿಕೆಟ್ ಮೈಲಿಗಲ್ಲನ್ನು ದಾಟಿ ದಾಖಲೆ ಬರೆದಿದ್ದಾರೆ.
ಭಾನುವಾರ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್ನ 4 ನೇ ದಿನದಾಟದಂದು ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ವಿಕೆಟ್ ಕಿತ್ತು ಬುಮ್ರಾ ಈ ಸಾಧನೆ ಮಾಡಿದ್ದಾರೆ. ಸರಣಿಯಲ್ಲಿ ಈಗಾಗಲೇ ಅತಿ ಹೆಚ್ಚು ವಿಕೆಟ್ ಪಡೆದಿರುವ ಬುಮ್ರಾ, ಬೀಟ್ಸ್ ಮಾಲ್ಕಮ್ ಮಾರ್ಷಲ್, ಜೋಯಲ್ ಗಾರ್ನರ್ ಮತ್ತು ಕರ್ಟ್ಲಿ ಆಂಬ್ರೋಸ್ ಅವರಂತಹ ಕೆಲವು ಸಾರ್ವಕಾಲಿಕ ಶ್ರೇಷ್ಠರನ್ನು ಹಿಂದಿಕ್ಕಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ಗಳನ್ನು ಹೊಂದಿರುವ ಎಲ್ಲಾ ಬೌಲರ್ಗಳಲ್ಲಿ, ಬುಮ್ರಾ ಅತ್ಯುತ್ತಮ ಸರಾಸರಿ ಹೊಂದಿದ್ದಾರೆ.
Supreme Court Recruitment: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ! ಆಸಕ್ತರು ಇವತ್ತೇ ಅಪ್ಲೈ ಮಾಡಿ
201ನೇ ಮತ್ತು 202ನೇ ವಿಕೆಟನ್ನು ಕೆಲವೇ ದಿನಗಳಲ್ಲಿ ಕಬಳಿಸಿದ ಬುಮ್ರಾ, ಟೆಸ್ಟ್ ಕ್ರಿಕೆಟ್ನಲ್ಲಿ 19.5 ಸರಾಸರಿಯನ್ನು ಹೊಂದಿದ್ದಾರೆ. ಆ ಮೂಲಕ ಮಾಲ್ಕಮ್ ಮಾರ್ಷಲ್ (20.9), ಜೋಯಲ್ ಗಾರ್ನರ್ (21.0) ಮತ್ತು ಕರ್ಟ್ಲಿ ಆಂಬ್ರೋಸ್ (21.0) ಅವರನ್ನು ಹಿಂದಿಕ್ಕಿದ್ದಾರೆ. ಬುಮ್ರಾ ಅವರು 20 ಕ್ಕಿಂತ ಕಡಿಮೆ ಸರಾಸರಿಯನ್ನು ಕಾಯ್ದುಕೊಂಡು ಟೆಸ್ಟ್ನಲ್ಲಿ 200 ವಿಕೆಟ್ಗಳನ್ನು ಪಡೆದ ಮೊದಲ ಬೌಲರ್ ಆಗಿದ್ದಾರೆ.