ಬೆಂಗಳೂರು : ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕ ಸೇರಿದಂತೆ ದೇಶದ 17 ಕಡೆ ದಾಳಿ ನಡೆಸಿದೆ.
ಈ ವರ್ಷದ ಜನವರಿ 12 ರಂದು ಎನ್ಐಎ ಈ ಪ್ರಕರಣದ ಸಂಬಂಧ 8 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿತ್ತು. ಚಾರ್ಜ್ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ 2013 ರಿಂದ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಉಳಿದ ಇಬ್ಬರು ಆರೋಪಿಗಳಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಹ ಖೈದಿಗಳನ್ನ ಸೆಳೆದು ಉಗ್ರ ಕೃತ್ಯಕ್ಕೆ ಪ್ರೇರೇಪಣೆ ನೀಡಿದ ಹಿನ್ನೆಲೆಯಲ್ಲಿ ಇಂದು ಏಳು ರಾಜ್ಯದಲ್ಲಿ ಎನ್ಐಎ ದಾಳಿ ನಡೆಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯ ತೂಬಾ ಲೇಔಟ್ ಮತ್ತು ಸರಾಯಿ ಪಾಳ್ಯದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ.