ಬೆಂಗಳೂರು:– ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ.
ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಿಎಂ ಆಗಿರುವುದು ಸಹಿಸೋದಕ್ಕೆ ಆಗ್ತಿಲ್ಲ: ಜಮೀರ್!
ಹೀಗಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿ ಅರ್ಜಿ ಆಹ್ವಾನಿಸಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್-ಎ ದರ್ಜೆಯ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್ 12ರಿಂದ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು: ಪಶು ವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 342 (ಉಳಿಕೆ ಮೂಲ ವೃಂದ) + 58 (ಬ್ಯಾಕ್ಲಾಗ್)
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 12
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆ.12
ವಿದ್ಯಾರ್ಹತೆ
ಪಶು ವೈದ್ಯಕೀಯ ವಿಜ್ಞಾನ (BVSc), ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ (B.V.Sc. & AH) ಪದವೀಧರರು ಅರ್ಜಿ ಸಲ್ಲಿಸಬಹುದು. (ಕೆವಿಸಿ/ಐವಿಸಿಯಲ್ಲಿ ನೋಂದಣಿಯಾಗಿರಬೇಕು
ವಯೋಮಿತಿ
ಅರ್ಜಿ ಸಲ್ಲಿ..ಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ – 18 ವರ್ಷಗಳ ವಯೋಮಾನದವರಾಗಿರಬೇಕು ಹಾಗೂ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅರ್ಹತೆ: 35 ವರ್ಷ
ಒಬಿಸಿ (2ಎ, 2ಬಿ, 3ಎ, 3ಬಿ): 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ-1: 40 ವರ್ಷ