ಚೆನ್ನೈ: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2024) ಇಂದಿನಿಂದ ಆರಂಭಗೊಳ್ಳುತ್ತಿದೆ. ಆರ್ಸಿಬಿ – ಸಿಎಸ್ಕೆ (RCB vs CSK) ನಡುವಿನ ಹೈವೋಲ್ಟೇಜ್ ಕದನಕ್ಕೆ ಚೆನ್ನೈನ ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ಸಜ್ಜಾಗಿದೆ. ಇನ್ನೆರಡು ತಿಂಗಳ ಕಾಲ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ನೀಡಲಿದೆ.
ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ಚೆನ್ನೈ ಮತ್ತು ಆರ್ಸಿಬಿ ತಂಡಗಳು ತಮ್ಮದೇ ಆದ ಫ್ಯಾನ್ಸ್ ಬೇಸ್ ಹೊಂದಿವೆ. ಭಾರತ-ಪಾಕಿಸ್ತಾನ ಪಂದ್ಯದಷ್ಟೇ ಇತ್ತಂಡಗಳ ಕಾದಾಟ ರೋಚಕವಾಗಿರುತ್ತದೆ. ಕ್ರಿಕೆಟ್ ಪ್ರೇಮಿಗಳು ಬಹುದಿನಗಳಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಐಪಿಎಲ್ 17ನೇ ಸೀಸನ್ ಇಂದಿನಿಂದ ಆರಂಭವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಲಿದೆ.
ರಾತ್ರಿ ಅನ್ನ ಉಳಿದರೆ ಅದನ್ನು ಬಿಸಾಡಬೇಡಿ! ಅದರ ಸೇವನೆಯಿಂದಾಗುವ ಪ್ರಯೋಜನ ತಿಳಿದ್ರೆ ಶಾಕ್ ಆಗ್ತಿರಾ.!
ಈ ಪಂದ್ಯವನ್ನು ಚೆಪಾಕ್ ಅಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯಕ್ಕೂ ಮುನ್ನ ವರ್ಣರಂಜಿತ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಕಲಾವಿದರು, ಸಂಗೀತಗಾರರು ಮತ್ತು ಗಾಯಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಬಳಿಕ ಪಂದ್ಯ ಆರಂಭವಾಗಲಿದೆ.