ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ದ ರೆಡ್ ಕಾರ್ನರ್ ನೊಟೀಸ್ ಜಾರಿಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ ಐ ಟಿ ಲುಕ್ ಔಟ್ ನೊಟೀಸ್ ಜಾರಿ ಮಾಡಿದೆ. ಆದರೆ ಬಂಧನ ಭೀತಿಯಿಂದ ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ಸು ಬರೋದು ಅನುಮಾನ ಎನ್ನಲಾಗುತ್ತಿದೆ.
ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದು, ವೀಸಾ ಆಗತ್ಯತೆ ಬೀಳುವುದಿಲ್ಲ. ಹೀಗಾಗಿ ದೇಶದಿಂದ ದೇಶಕ್ಕೆ ಓಡಾಡಿಕೊಂಡು ಇರಬಹುದು. ಈ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೊಟೀಸ್ ಹೊರಡಿಸುವ ಸಾಧ್ಯತೆ ಇದೆ. ರೆಡ್ ಕಾರ್ನರ್ ನೊಟೀಸ್ ಹೊರಡಿಸಲು ಸಿಐಡಿ ಮುಖಾಂತರ ಸಿಬಿಐ ಗೆ ಮನವಿ ಮಾಡಬೇಕು.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಸಿಬಿಐ ಇಂಟರ್ ಪೋಲ್ ಮುಖಾಂತರ ರೆಡ್ ಕಾರ್ನರ್ ನೊಟೀಸ್ ಹೊರಡಿಸಬೇಕು. ರೆಡ್ ಕಾರ್ನರ್ ನೊಟೀಸ್ ಜಾರಿಯಾದ್ರೆ ಯಾವ ದೇಶದಲ್ಲಿದ್ದರೂ ಆ ದೇಶದ ಪೊಲೀಸರು ಆರೋಪಿಯನ್ನು ಬಂಧನ ಮಾಡಿ ಸಂಬಂಧಪಟ್ಟ ದೇಶಕ್ಕೆ ಮಾಹಿತಿ ನೀಡುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ವಿರುದ್ದ ರೆಡ್ ಕಾರ್ನರ್ ನೊಟೀಸ್ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ.