ಕೋಲ್ಕತಾ :- ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದು ಮೂವರು ಯುವಕರು ಮೃತಪಟ್ಟ ಘಟನೆ ಜರುಗಿದೆ. ಇಬ್ಬರು ನದಿಗೆ ಹಾರಿ ತಮ್ಮನ್ನು ರಕ್ಷಿಸಿಕೊಂಡಿದ್ದಾರೆ.
ಅಹಿರಾನ್ ರೈಲು ನಿಲ್ದಾಣದ ಸಮೀಪ ರೈಲ್ವೆ ಸೇತುವೆಯ ಮೇಲೆ ಹಳಿಗಳ ಮಧ್ಯೆ ಐದು ಜನ ಯುವಕರು ರೀಲ್ಸ್ ಮಾಡುತ್ತಿದ್ದರು. ಈ ವೇಳೆ ಹೌರಾ-ರಾಧಿಕಾಪುರ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ನದಿಗೆ ಹಾರಿ ತಮ್ಮನ್ನು ರಕ್ಷಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರೈಲು ಹಳಿಗಳ ಮೇಲೆ ಯಾವುದೇ ಕ್ಷಣದಲ್ಲೂ ರೈಲು ಬರಬಹುದು ಆದ್ದರಿಂದ ಜನರು ರೈಲ್ವೆ ಹಳಿಗಳಿಂದ ದೂರವಿರಬೇಕು ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.