ಬೆಂಗಳೂರು:- ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ನೋಂದಣಿ ಆರಂಭ ಮಾಡಲಾಗುತ್ತದೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಶ್ರೀರಾಮುಲು ಸಂಪರ್ಕಿಸಿದ್ದು ನಿಜ: ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್!
ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು. ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಲ್ಗೆ 5,650 ರೂ. ಗಳಂತೆ ಖರೀದಿ ಮಾಡಲಾಗುವುದು. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ನಾಫೆಡ್ ಮತ್ತು ಎನ್ಸಿಸಿಎಫ್ ಸಂಸ್ಥೆಗಳನ್ನು ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ಮತ್ತು ಕಲಬುರಗಿಯ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಲಾಗಿದೆ. ಈ ಮಂಡಳಿಗೆ ಕಡಲೆಕಾಳು ಖರೀದಿ ಮಾಡಬೇಕಾದ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ. ರೈತರು ತಮ್ಮ ಸಮೀಪದ ಟಿ.ಎ.ಪಿ.ಸಿ.ಎಂ.ಎಸ್, ಎಫ್.ಪಿ.ಒ ಹಾಗೂ ಪಿ.ಎ.ಸಿ.ಎಸ್. ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.