ಬೆಂಗಳೂರು: ಓಮಿಕ್ರಾನ್ ನಿಯಂತ್ರಣದ ಸಂಬಂಧ ಸರ್ಕಾರ ಹೆಚ್ಚಿನ ನಿಗಾ ವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ನಗರದ ಆರ್ ಟಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ & ಓಮಿಕ್ರಾನ್ ಎರಡನ್ನೂ ಗಮನಿಸುತ್ತಿದ್ದು, ಅಕ್ಕಪಕ್ಕದ ರಾಜ್ಯಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ಹೀಗಾಗಿ ನಾಳೆ ಚರ್ಚೆ ನಡೆಸಲಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಹೇಳಿದರು.
ಅಲ್ಲದೇ ಜನರು ಸಹಾ ಸೋಂಕಿನ ಸಂಬಂಧ ಮುಂಜಾಗ್ರತೆ ವಹಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಈ ಮೂಲಕ ಸೋಂಕು ನಿಯಂತ್ರಿಸುವಲ್ಲಿ ಜನರು ಸಹಕರಿಸಬೇಕು. ಸದ್ಯದ ಪರಿಸ್ಥಿಯಲ್ಲಿ ಬೆಂಗಳೂರಿಗೆ ಕಟ್ಟುನಿಟ್ಟಿನ ನಿಯಮ ಜಾರಿ ಅನಿವಾರ್ಯವಾಗಿದೆ. ಹೀಗಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
