ಬೆಂಗಳೂರು:- ಜೈಲಿಂದ ರಿಲೀಸ್ ಆದ ಸಿಟಿ ರವಿಗೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದ್ದು, ಹೆಗಲ ಮೇಲೆ ಹೊತ್ತು ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಅಸಂವಿಧಾನಿಕ ಪದ ಬಳಸಿದ ಆರೋಪದ ಮೇಲೆ ಬಂಧನವಾಗಿದ್ದ ಬಿಜೆಪಿ ಎಂಎಲ್ಸಿ ಸಿ.ಟಿ ರವಿಗೆ ನ್ಯಾಯಾಲಯ ಜಾಮೀನು ನೀಡಿದೆ. ಈ ಬೆನ್ನಲ್ಲೇ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ.
ಕಾರ್ಯಕರ್ತರು ಪಟಾಕಿ ಸಿಡಿಸಿ, ಹಾರ ಹಾಕಿ ಅದ್ಧೂರಿ ಸ್ವಾಗತದೊಂದಿಗೆ ಬರಮಾಡಿಕೊಂಡಿದ್ದಾರೆ. ಸಿ.ಟಿ ರವಿ ಅವರನ್ನ ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ್ದಾರೆ. ಇದೇ ವೇಳೆ ಕೈ ಮುಗಿದು ಧನ್ಯವಾದ ಹೇಳಿರುವ ಸಿ.ಟಿ ರವಿಗೆ, ನಿಮ್ಮೊಂದಿಗೆ ನಾವಿದ್ದೇವೆ, ಹೆದರಬೇಡಿ ಅಭಯ ನೀಡಿದ್ದಾರೆ.