ಬೆಂಗಳೂರು: ಜೆಡಿಎಸ್ ಶಾಸಕರ ನಿಯೋಗ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಟೀಂ ಇಂದು ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳ ವಿಶೆಷ ಅನುದಾನದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅಭಿವೃದ್ಧಿ ಕಾಮಗಾರಿಗನ್ನು ಕೈಗೆತ್ತಿಕೊಳ್ಳಲು ಜನತಾದಳ(ಜಾ) ಪಕ್ಷದ ಶಾಸಕರುಗಳ ವಿಧಾನಸಭಾ ಕ್ಷೇತ್ರಗಳಿಗೆ ವಿಶೇಷ ಅನುದಾನ ಬಿಡುಗಡೆಗೆ ಸಲ್ಲಿಕೆಯಾಗಿರುವ ಕಡತಕ್ಕೆ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಮತ್ತು ಕಳೆದ 10 ವರ್ಷಗಳ ಹಿಂದೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ವಾರ್ಷಿಕ ರೂ 2 ಕೋಟಿಗಳಿಗೆ ನಿಗಧಿಪಡಿಸಲಾಗಿರುತ್ತದೆ.
ಪ್ರಸ್ತುತ ಸರ್ಕಾರದ ದರಪಟ್ಟಿಯಲ್ಲಿ ನಿಗಧಿಪಡಿಸಿರುವ ದರಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾರಣ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು 5 ಕೋಟಿಗೆ ಹೆಚ್ಚಿಸಬೇಕು ಎಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರು ಮಾನ್ಯ ಮುಖ್ಯಮಂತ್ರಿ ಸಿದ್ಧರಾಮ್ಯನರಿಗೆ ಇಂದು ಮನವಿ ನೀಡಿದರು.