ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ನ ಎಫ್ಎಂಸಿಜಿ ಅಂಗ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಸಂಪೂರ್ಣ ಒಡೆತನದ ಅಂಗಸಂಸ್ಥೆಯಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ನಿಂದ ಕ್ಯಾಂಪಾ ಕೋಲಾ (Campa Cola) ಪರವಾಗಿ ಹೊಸದಾಗಿ ಬ್ರ್ಯಾಂಡ್ ಅಭಿಯಾನವನ್ನು ಆರಂಭಿಸಲಾಗಿದೆ. ಕ್ಯಾಂಪಾ ಕೋಲಾ ಎಂಬುದು ಖ್ಯಾತ ಭಾರತೀಯ ಪಾನೀಯ ಬ್ರ್ಯಾಂಡ್ ಆಗಿದೆ.
ಈ ಅಭಿಯಾನವು ವಿಭಿನ್ನ ವಿಧಾನದ ಭರವಸೆಯನ್ನು ನೀಡುತ್ತದೆ. ಇದರ ಜತೆಗೆ ನೈಜ ಭಾರತೀಯರನ್ನು ಪ್ರತಿಬಿಂಬಿಸುತ್ತದೆ ಮತ್ತು ಅವರ ಪಾರಮ್ಯ ಹಾಗೂ ಸಂಕಲ್ಪ ಸ್ಫೂರ್ತಿಯನ್ನು ಸಂಭ್ರಮಿಸುತ್ತದೆ. ನಿರಂತರವಾಗಿ ಹೊಸ ದಿಗಂತವನ್ನು ಬೆನ್ನಟ್ಟುವ ಯುವ ಭಾರತದ ಧೈರ್ಯಶಾಲಿ ಮನೋಭಾವಕ್ಕೆ ಗೌರವ ಸಮರ್ಪಣೆ ಮಾಡುತ್ತದೆ.
KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ
“ಕಠಿಣ ಕೆಲಸಗಳನ್ನು ಮಾಡುವಂಥ ಭಾರತೀಯರಿಗೆ, ತಮ್ಮ ಉನ್ನತ ಆಕಾಂಕ್ಷೆಗಳನ್ನು ಈಡೇರಿಸುವುದಕ್ಕೆ ನಮ್ಮ ಸಂವಹನವಾಗಿದ್ದು, ಕೈಗೆಟುಕುವ ಬೆಲೆಗೆ ಜಾಗತಿಕ ಗುಣಮಟ್ಟದ ಉತ್ಪನ್ನಗಳನ್ನು ಒದಗಿಸುವುದಕ್ಕೆ ಇದು ನಮ್ಮ ಪಾಲಿಗೆ ಪಯಣದ ಆರಂಭವಾಗಿದೆ,” ಎಂದು ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ಸಿಒಒ ಕೇತನ್ ಮೋದಿ ಹೇಳಿದ್ದಾರೆ.
ಆರ್ ಸಿಪಿಎಲ್ ಪೂರೈಕೆ ಸರಪಳಿಯನ್ನು ಬಲಪಡಿಸುತ್ತಿದ್ದು, ವಿತರಣೆಯನ್ನು ವಿಸ್ತರಣೆ ಮಾಡುವ ಮೂಲಕ ಕಾರ್ಯಾಚರಣೆಯನ್ನು ದೇಶದ ವಿವಿಧ ಭಾಗಗಳಲ್ಲಿ ವ್ಯಾಪಿಸುತ್ತಿದೆ. ಈ ಬ್ರ್ಯಾಂಡ್ ಫಿಲ್ಮ್ ಅನ್ನು ಪರಿಕಲ್ಪನೆ ಮಾಡಿಕೊಂಡಿರುವುದು ಆಡ್ ಗುರು ಪ್ರಸೂನ್ ಜೋಶಿ. ಇದನ್ನು ಟೀವಿ, ಡಿಜಿಟಲ್, ಹೊರಾಂಗಣ ಮತ್ತು ಮುದ್ರಣ ಮಾಧ್ಯಮ ಹೀಗೆ ಎಲ್ಲೆಡೆ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದಕ್ಕೆ ಯೋಜನೆ ರೂಪಿಸಲಾಗಿದೆ.