ಬೆಂಗಳೂರು: ಡಿಸೆಂಬರ್ 27 ರಂದು ಕೋವಿಡ್ ಸೋಂಕಿನಿಂದ ಮೃತಪಟ್ಟವರ ವಾರಸುದಾರರು ಹಾಗೂ ಕುಟುಂಬಸ್ಥರಿಗೆ ಪರಿಹಾರ ಧನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಡಳಿತ ಹಾಗೂ ಬಿಬಿಎಂಪಿ ವತಿಯಿಂದ ನ್ಯಾಷನಲ್ ಕಾಲೇಜು ಮೈದಾನ, ಕೆ.ಆರ್.ರಸ್ತೆ, ಬಸವನಗುಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.
ಅವರೊಂದಿಗೆ ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇನ್ನು ಚಿಕ್ಕಪೇಟೆ ಶಾಸಕ ಉದಯ್.ಜಿ.ಗರುಡಾಚಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಉಪಸ್ಥಿತಿಯಲ್ಲಿ ಇರುತ್ತಾರೆ
