ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಹೈಕೋರ್ಟ್ನಲ್ಲಿ ತಾಂತ್ರಿಕ ಕಾರಣದಿಂದ ರಿಲೀಫ್ ಸಿಕ್ಕಿದೆ. ಸಿಐಡಿಯನ್ನು ಪೊಲೀಸ್ ಠಾಣೆ ಎಂದು ಘೋಷಿಸಿಲ್ಲ, ಸರ್ಕಾರ ಈ ಬಗ್ಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಠಾಣೆಯ ಅಧಿಕಾರವಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅವಕಾಶವಿಲ್ಲ ಎಂಬ ಕಾರಣಕ್ಕೆ ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗಿದೆ.
ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ಕಾರ ಮತ್ತು ಪ್ರೇಮಲತಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧದ ಪ್ರಕರಣ ಕೈಬಿಟ್ಟಿದ್ದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗಾಯಕಿ ಪ್ರೇಮಲತಾ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾ ಮಾಡಿದೆ.
