ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು. ದರ್ಶನ್ಗೆ ಈಗಾಗಲೇ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಈಗ ಜನರಲ್ ಬೇಲ್ ಗೆ ಅರ್ಜಿ ಸಲ್ಲಿಸಲಾಗಿತ್ತು. ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಾಡಿದ್ದಾರೆ. ಎಸ್ಪಿಪಿ ವಾದ ಬಾಕಿ ಇರುವ ಇನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.
PAN 2.0: ನಿಮ್ಮ Pan card ಇನ್ಮುಂದೆ QR ಕೋಡ್ ನೊಂದಿಗೆ ಬರಲಿವೆ..! ಏನಿದು ಪ್ಯಾನ್ 2.0 ಯೋಜನೆ.? ಇಲ್ಲಿದೆ ಮಾಹಿತಿ
ದರ್ಶನ್ ಮ್ಯಾನೇಜರ್ ನಾಗರಾಜ್ ಪರ ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿದ್ದಾರೆ. ಆರೋಪಿಗಳಿಗೆ ಗ್ರೌಂಡ್ಸ್ ಆಫ್ ಅರೆಸ್ಟ್ ನೀಡಿಲ್ಲ. ಬಂಧನಕ್ಕೆ ಕಾರಣಗಳನ್ನು ನೀಡದಿರುವುದು ಗಂಭೀರ ಪ್ರಮಾದ. ಈ ಕಾರಣಕ್ಕೆ ಜಾಮೀನು ನೀಡಬೇಕೆಂದು ಸಂದೇಶ್ ಚೌಟ ವಾದ ಮಾಡಿದ್ದಾರೆ. ದರ್ಶನ್ ಸೇರಿ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ ಆಗಿದೆ.