ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಶ್ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.
ಹೈಕೋರ್ಟ್ ಆದೇಶ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಪ್ರದೋಶ್ನನ್ನು ಪೊಲೀಸರು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಆಗಸ್ಟ್ 28ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ ಪ್ರದೋಶ್ನನ್ನು ರವಾನಿಸಲಾಗಿದೆ.
Pension: ಹಿರಿಯ ನಾಗರಿಕರಿಗೆ ಶಾಕ್ ಕೊಟ್ಟ ಮೋದಿ ಸರ್ಕಾರ! ಈ ದಾಖಲೆ ಕೊಡದಿದ್ರೆ ಪಿಂಚಣಿ ರದ್ದಾಗುವುದು ಪಕ್ಕಾ
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ಗೆ ರಾಜ್ಯಾತಿಥ್ಯ ವಿಚಾರವಾಗಿ ದರ್ಶನ್ ಸೇರಿ ಹಲವರನ್ನು ರಾಜ್ಯದ ವಿವಿಧ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು. ಬೆಳಗಾವಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗುವ ವೇಳೆ ಪ್ರದೋಶ್ ಪೊಲೀಸ್ ವಾಹನದಲ್ಲಿ ಕುಳಿತು ನಗೆ ಬೀರಿದ್ದಾನೆ.