ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು. ವಾದ, ಪ್ರತಿವಾದದ ಬಳಿಕ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಲಾಯ್ತು. ವಿಚಾರಣೆ ವೇಳೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಅವರು ದರ್ಶನ್ಗೆ ಮಧ್ಯಂತರ ಜಾಮೀನಿನ ನೀಡಿದ ವೇಳೆ ಸೂಚಿಸಲಾಗಿದ್ದ ಕೆಲ ನಿಯಮಗಳನ್ನು ಪಾಲಿಸಿಲ್ಲವ ಎಂದು ವಾದ ಮಂಡಿಸಿದರು. ದರ್ಶನ್ ಪರ ವಕೀಲರು ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ನ್ಯಾಯಮೂರ್ತಿಗಳು ಸೂಚಿಸಿದರು. ಇದೇ ವೇಳೆ ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದರು. 6 ವಾರಗಳ ಅವಧಿಗೆ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ, ಆದರೆ ಸರ್ಜರಿಯ ದಿನಾಂಕ ತಿಳಿಸಿಲ್ಲವೆಂದು ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ಅದೇ ವೇಳೆಗೆ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಮತ್ತೊಂದು ವೈದ್ಯಕೀಯ ವರದಿಯನ್ನು ಹೈಕೋರ್ಟ್ಗೆ ಸಲ್ಲಿಕೆ ಮಾಡಿದರು.
ಅಬ್ಬಾಬ್ಬ.. ನೀಲಗಿರಿ ಎಲೆಗಳಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?
ಅದೇ ವೈದ್ಯಕೀಯ ವರದಿಯ ಪ್ರತಿಯನ್ನು ಎಸ್ಪಿಪಿ ಪ್ರಸನ್ನ ಕುಮಾರ್ ಅವರಿಗೆ ನೀಡಲಾಯ್ತು. ವರದಿ ಪರಿಶೀಲಿಸಿ ಪ್ರತಿಕ್ರಿಯಿಸಲು ಸೂಚನೆ ನೀಡಿದ ನ್ಯಾಯಮೂರ್ತಿಗಳು ನವೆಂಬರ್ 26ಕ್ಕೆ ಅರ್ಜಿ ವಿಚಾರಣೆ ಮುಂದೂಡಿದರು. ದರ್ಶನ್ಗೆ ಬೆನ್ನು ನೋವಿನ ಕಾರಣದಿಂದ ಆರು ವಾರಗಳ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಈಗಾಗಲೇ ಮೂರು ವಾರಗಳು ಕಳೆದು ಹೋಗಿದ್ದು, ದರ್ಶನ್ ಇದುವರೆಗೂ ಯಾವುದೇ ಸರ್ಜರಿಗೆ ಒಳಗಾಗಿಲ್ಲ.
ಇದರ ನಡುವೆ ಮಧ್ಯಂತರ ಜಾಮೀನು ರದ್ದತಿ ಕೋರಿ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸುವುದಾಗಿ ಪೊಲೀಸ್ ಇಲಾಖೆ ನಿರ್ಧಾರಿಸಿದ್ದು, ಇದನ್ನು ಗೃಹ ಸಚಿವ ಪರಮೇಶ್ವರ್ ಸಹ ಖಾತ್ರಿ ಪಡಿಸಿದ್ದಾರೆ. ದರ್ಶನ್ಗೆ ಮಧ್ಯಂತರ ಜಾಮೀನು ಮಾತ್ರವೇ ದೊರೆತಿದ್ದು, ನಿಯಮಿತ ಜಾಮೀನು ಕೊಡಿಸುವ ಪ್ರಯತ್ನವನ್ನು ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಮಾಡುತ್ತಿದ್ದಾರೆ. ನವೆಂಬರ್ 26ಕ್ಕೆ ಅರ್ಜಿ ವಿಚಾರಣೆ ನಡೆಯಲಿದ್ದು ಅಂದು ಏನಾಗಲಿದೆ ಎಂಬ ಕುತೂಹಲ ಇದೆ.