ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಬಿ ದಯಾನಂದ ಮಾಹಿತಿ ನೀಡಿದ್ದಾರೆ.ಈ ಒಂದು ಪ್ರಕರಣವನ್ನು ಬಹುಬೇಗ ಇತ್ಯರ್ಥಗೊಳಿಸಲು ಫಾಸ್ಟ್ಟ್ರ್ಯಾಕ್ ಕೋರ್ಟ್ ಅಥವಾ ಸ್ಪೇಷಲ್ ಕೋರ್ಟ್ ನೇಮಿಸಲು ಮನವಿ ಮಾಡುವ ಚಿಂತನೆಯಲ್ಲಿದೆ ಪೊಲೀಸ್ ಇಲಾಖೆ.
ಈ ಬಗ್ಗೆ ಈ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮನವಿ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.ಬಹುಪಾಲು ರಿಪೋರ್ಟ್ ಗಳು ಚಾರ್ಜ್ ಶೀಟ್ ಸಲ್ಲಿಕೆಗೂ ಮುನ್ನವೇ ನಮ್ಮ ಕೈಸೇರಿದೆ ಮತ್ತಷ್ಟು ರಿಪೋರ್ಟ್ ಬರಬೇಕಿದೆ, ಆ ಬಳಿಕ ಕೋರ್ಟ್ ಗೆ ಸಲ್ಲಿಸುತ್ತೇವೆ
ದರ್ಶನ್ಗೆ ಸಿಕ್ಕ ರಾಜಾತಿಥ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಬಿ. ದಯಾನಂದ್ ಅವರು ಈಗಾಗಲೇ ಪ್ರಕರಣವನ್ನು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಪೊಲೀಸ್ ಡಾ.ಚಂದ್ರಗುಪ್ತ ನೇತೃತ್ವದಲ್ಲಿ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.