ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.
BMTC ಚಾಲಕನ ನಿರ್ಲಕ್ಷ್ಯ: ಆಟೋಗೆ ಬಸ್ ಡಿಕ್ಕಿ, ವ್ಯಕ್ತಿ ಸ್ಥಿತಿ ಗಂಭೀರ!
ಹೈಕೋರ್ಟ್ನಲ್ಲಿ ಇಂದು ಮೊದಲ ಬಾರಿಗೆ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದ್ದಾರೆ. ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರವಾಗಿ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟ್ನಲ್ಲಿಯೂ ವಾದ ಮಂಡಿಸುತ್ತಿದ್ದು, ದರ್ಶನ್ಗೆ ಜಾಮೀನು ಕೊಡಿಸುವ ಅವಿರತ ಪ್ರಯತ್ನ ಮಾಡುತ್ತಿದ್ದಾರೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದೆ. ಸಿವಿ ನಾಗೇಶ್ ಅವರು ದರ್ಶನ್ ಪರವಾಗಿ ವಾದ ಮಂಡನೆ ಆರಂಭಿಸಿ, ದರ್ಶನ್ಗೆ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದು, ಅವರನ್ನು ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್ಗೆ ಚಿಕಿತ್ಸೆಯ ಅಗತ್ಯವಿದೆ. ಹಾಗಾಗಿ ಜಾಮೀನು ಕೋರುತ್ತಿದ್ದೇವೆ ಎಂದು ಹೇಳಿದರು. ಸಿವಿ ನಾಗೇಶ್ ಅವರ ಮಾತು ಆಲಿಸಿ, ಜೈಲಧಿಕಾರಿಗಳಿಂದ ದರ್ಶನ್ರ ಆರೋಗ್ಯ ಸ್ಥಿತಿಯ ವರದಿಯನ್ನು ಕೇಳಿದರು. ಬಳಿಕ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಲಾಗಿದೆ.