ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಬಿಗ್ ರಿಲೀಫ್ ಸಿಕ್ಕಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೂನ್ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು.
Friday Remedy: ಶುಕ್ರವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ.! ಬಡತನ ಕಾಡುತ್ತೆ
ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿತ್ತು. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಅವರಿಗೆ ಬಿಗ್ ರಿಲೀಫ್ ಕೊಟ್ಟಿದೆ.
ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.