ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ ನ ಪ್ರಮುಖ ಆರೋಪಿ A 14 ಪ್ರದೋಶ್ ಬೆಳಗಾವಿ ಜೈಲಿನಿಂದ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲು ಆದೇಶ ನೀಡಿದೆ
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಪೀಠದಿಂದ ಆದೇಶ ನೀಡಲಾಗಿದ್ದು ಪರಪ್ಪನ ಅಗ್ರಹಾರ ಜೈಲಲ್ಲಿ ಐಷಾರಾಮಿ ಜೀವನ ನಡೆಸಿದ ನಟ ದರ್ಶನ್ ಇದ್ದ ಫೋಟೋದಲ್ಲಿ ಪ್ರದೋಷ್ ಕಾಣಿಸಿರಲಿಲ್ಲ ಹಾಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಗೆ ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನೂ ಸೇರಿದಂತೆ ಕೆಲ ಸಂಗಡಿಗರನ್ನು ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಯಿತು. ದರ್ಶನ್ ಸಹಚರ ಮತ್ತು ಪ್ರಕರಣದಲ್ಲಿ ಅರೋಪಿ ನಂಬರ್ 14 ಆಗಿರುವ ಪ್ರದೋಶ್ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು. 44 ದಿನಗಳ ಬಳಿಕ ಅವರನ್ನು ಪುನಃ ಬೆಂಗಳೂರಿನ ಕೇಂದ್ರೀಯ ಕಾರಾಗೃಹಕ್ಕೆ ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು.
ಇನ್ನೊಂದೆಡೆ ಅನಾರೋಗ್ಯದ ನಿಮಿತ್ತ ದರ್ಶನ್ ಬಳ್ಳಾರಿ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್ ಶಿಫ್ಟ್ ಆಗಲಿದ್ದಾರೆ ಎಂಬ ಮಾಹಿತಿ ಕೂಡ ಇದೆ