ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದಾರೆ. ನಟಿ, ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಮೊದಲ ಆರೋಪಿ ಆಗಿದ್ದಾರೆ. ದರ್ಶನ್ರ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಪರವಾಗಿ ಹೋರಾಟ ನಡೆಸುತ್ತಿದ್ದು, ವಕೀಲರನ್ನು ನೇಮಿಸಿ ದರ್ಶನ್ರ ಬಿಡುಗಡೆಗೆ ಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ಬಂದಿದ್ದಾರೆ.
ಪ್ರಕರಣದ ತನಿಖಾಧಿಕಾರಿ ನಟನ ಪತ್ನಿಗೆ ನೋಟಿಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ಜೂನ್ 19ರಂದು ಬೆಳಗ್ಗೆ ವಿಜಯಲಕ್ಷ್ಮಿ ಅವರಿಗೆ ನೋಟಿಸ್ ಕಳುಹಿಸಿದ್ದರು. ಪ್ರಕರಣದಲ್ಲಿ ಮಾಹಿತಿ ಪಡೆಯಲು ನೋಟಿಸ್ ನೀಡಲಾಗಿದೆ ಎಂಬ ಮಾತು ಕೇಳಿ ಬಂದಿದೆ. ವಿಜಯಲಕ್ಷ್ಮಿ ಮನೆಯಲ್ಲಿ ಶೂ ಪತ್ತೆಯಾದ ಬಗ್ಗೆ ಮಾಹಿತಿ ಪಡೆಯಲು ನೋಟಿಸ್ ನೀಡಲಾಗಿದೆ ಎನ್ನಲಾಗುತ್ತಿದೆ.
Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ
ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ನೋಟಿಸ್ ಕಳುಹಿಸಲಾಗಿತ್ತು. ಪೊಲೀಸರ ನೋಟಿಸ್ ಹಿನ್ನೆಲೆ, ವಿಜಯಲಕ್ಷ್ಮಿ ವಿಚಾರಣೆಗೆ ಹಾಜರಾಗಿದ್ದಾರೆ. ತನಿಖಾಧಿಕಾರಿ ಮುಂದೆ ಪ್ರಕರಣದ ಬಗ್ಗೆ ಹಾಗೂ ಶೂಗಳ ಬಗ್ಗೆ ವಿಜಯಲಕ್ಷ್ಮಿ ಅವರು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.