ಬೆಂಗಳೂರು: ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದು ಮಹಜರು ಪ್ರಕ್ರಿಯೆ ಸಹ ಬಹುತೇಕ ಮುಗಿದೆ. ಇನ್ನೂ ರೇಣುಕಾಸ್ವಾಮಿ ಪ್ರಕರಣವನ್ನು ನಡೆಸಲು ರಾಜ್ಯ ಸರ್ಕಾರದ ವಿಶೇಷ ಅಭಿಯೋಜಕರಾಗಿ ಹಿರಿಯ ವಕೀಲ ಪ್ರಸನ್ನಕುಮಾರ್ ಅವರನ್ನು ನೇಮಿಸಲಾಗಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಪ್ರಕರಣದಲ್ಲಿ ಸಂಬಂಧಪಟ್ಟ ವಿಚಾರಣಾ ಮತ್ತು ಜಿಲ್ಲಾ ಸತ್ರ ನ್ಯಾಯಾಲಯಗಳಲ್ಲಿ ಹಾಜರಾಗಲು ಹಾಗೂ ಪ್ರಕರಣವನ್ನು ನಡೆಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಜೂ.9 ರಂದು ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರನ್ನೂ ಇಂದು ಕೋರ್ಟ್ಗೆ ಹಾಜರುಪಡಿಸಲಾಗುತ್ತಿದೆ.
6 ತಿಂಗಳಲ್ಲಿ ನಿಮ್ಮ ಆದಾಯವನ್ನು ಹೆಚ್ಚಿಸುವ ಬೆಳ್ಳುಳ್ಳಿ ಬಗ್ಗೆ ಇಲ್ಲಿದೆ ಮಾಹಿತಿ.!
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂದು ರೇಣುಕಾಸ್ವಾಮಿಯನ್ನು ಶೆಡ್ವೊಂದಕ್ಕೆ ಕರೆತಂದು ಹಲ್ಲೆ ನಡೆಸಲಾಗಿತ್ತು. ಗಂಭೀರ ಹಲ್ಲೆಯಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಪ್ರಕರಣ ಮುಚ್ಚಿಹಾಕಲು ಪ್ರಯತ್ನ ನಡೆದಿತ್ತು. ಮೃತದೇಹ ವಿಲೇವಾರಿ ಮಾಡಲು ಮತ್ತು ದರ್ಶನ್ ಹೆಸರು ಬಾಯಿಬಿಡದಿರಲು ಕೆಲವರಿಗೆ 30 ಲಕ್ಷ ರೂ. ಹಣ ನೀಡಲಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರು ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.