ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದಿರುವ ಡಿ ಗ್ಯಾಂಗ್ ಆರೋಪಿಗಳಲ್ಲಿ A1 ಆಗಿರುವ ಪವಿತ್ರಾಗೌಡ ಅವರು ಜೈಲಿಂದ ರಿಲೀಸ್ ಆಗಿದ್ದಾರೆ.
ಆರು ತಿಂಗಳ ಸೆರೆವಾಸ ಅಂತ್ಯ: ನಗು ನಗುತ್ತ ಜೈಲಿನಿಂದ ಹೊರ ಬಂದ ಪವಿತ್ರಾ ಗೌಡ
6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್ನ ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್ ವಿಧಿಸಿದೆ.