ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ವಿಚಾರಣೆ ತೀವ್ರವಾಗಿ ನಡೆಯುತ್ತಿದೆ. ರಾಜಕೀಯ ವಲಯದಲ್ಲೂ ಈ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಅರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ್ದಾರೆ. ರೇಣುಕಾಸ್ವಾಮಿ ಮರಣೋತ್ತರ ವರದಿ ತಿದ್ದಲು ಯತ್ನಿಸಿರುವ ಆರೋಪದ ಬಗ್ಗೆ ಉತ್ತರಿಸಿದ ಅವರು,
ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅತ್ಯಂತ ಕ್ರೂರವಾಗಿ ಕೊಲೆ ಮಾಡಲಾಗಿದೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿದ್ದಲು ಪ್ರಯತ್ನ ಮಾಡಿರುವ ಬಗ್ಗೆ ಗೊತ್ತಿಲ್ಲ. ನಾವು ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಒಂದು ವೇಳೆ ಪೊಲೀಸ್ ತನಿಖೆಯಿಂದ ಆರೋಪ ಸಾಬೀತಾದರೆ ಅಂಥ ವೈದ್ಯರ ವಿರುದ್ಧ ಮುಲಾಜಿಲ್ಲದ ಕ್ರಮ ತೆಗೆದುಕೊಳ್ಳುತ್ತೇವೆ.ಆದರೆ ಆರೋಗ್ಯ ಇಲಾಖೆ ಬಗ್ಗೆ ಅಪನಂಬಿಕೆ ಬೇಡ ಎಂದಿದ್ದಾರೆ.
Black Pepper Tea: ಕಾಳು ಮೆಣಸಿನ ಚಹಾ ಕುಡಿದಿದ್ದೀರಾ..? ಇದರ ಸೇವನೆಯಿಂದ ಸಿಗಲಿದೆ ಹಲವು ಪ್ರಯೊಜನಗಳು
ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿ, ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಕೋಪದಲ್ಲಿ ಇಂತಹ ಘಟನೆಗಳು ಆಗುತ್ತವೆ. ಈ ಹಿಂದೆಯೂ ಆಗಿವೆ. ಸರ್ಕಾರಗಳು ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನೇ ಸರಿ, ನಾನು ಮಾಡಿದ್ದೇ ಸರಿ ಎನ್ನುವ ಅತಿರೇಕದ ವರ್ತನೆ ಜಾಸ್ತಿಯಾದಾಗ ಈ ರೀತಿಯ ಘಟನೆಗಳು ನಡೆಯುತ್ತವೆ. ಇಂತಹ ಘಟನೆಗಳು ಸಮಾಜಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ.