ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ದರ್ಶನ್ ಬಗ್ಗೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲವೂ ಸರಿ ಹೋಗುವ ಮೊದಲು ಬಹಳಷ್ಟು ತಪ್ಪಾಗುತ್ತೆ ನಂಬಿಕೆ ಇಟ್ಟುಕೊಳ್ಳಿ ಎಂದು ಸುಮಲತಾ ಇನ್ಸ್ಟಾಗ್ರಾಂ ಪೋಸ್ಟ್ ಮಾಡಿದ್ದಾರೆ. ಕೃಷ್ಣನ ನುಡಿ ಬರೆದು ಪೋಸ್ಟ್ ಮಾಡಿ ಡಿಪ್ಲೋಮೇಟಿಕ್ ನಟಿ ಸಂದೇಶ ನೀಡಿದ್ದಾರೆ.
ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಬೇಟಿ ಮಾಡಲು ಅವಕಾಶ ಇರುತ್ತದೆ. ಕಳೆದ ವಾರ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ಭೇಟಿ ಮಾಡಿದ್ದರು. ನಂತರ ನಟ ವಿನೋದ್ ಪ್ರಭಾಕರ್, ರಕ್ಷಿತಾ ಪ್ರೇಮ್ ದಂಪತಿ ಭೇಟಿ ಮಾಡಿ ಮಾತನಾಡಿದ್ದರು. ದರ್ಶನ್ರನ್ನು ಇಂದು (ಜು.1) ವಿಜಯಲಕ್ಷ್ಮಿ, ಪುತ್ರ ವಿನೀಶ್, ಮೀನಾ ತೂಗುದೀಪ್, ಸಹೋದರ ದಿನಕರ್ ಭೇಟಿ ನೀಡಿ ಧೈರ್ಯ ಹೇಳಿ ಬಂದಿದ್ದಾರೆ.