ಬೆಂಗಳೂರು:- ದರ್ಶನ್ & ಗ್ಯಾಂಗ್ ನಿಂದ ಸತ್ತಿರುವ ರೇಣುಕಾಸ್ವಾಮಿ ಕೇವಲ ಪವಿತ್ರಾಗೆ ಮಾತ್ರ ಮೆಸೇಜ್ ಕಳುಹಿಸಿರಲಿಲ್ಲ. ಕನ್ನಡದ ಸ್ಟಾರ್ ನಟಿಯರಿಗೂ ಅವನು ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋದು ಬಯಲಾಗಿದೆ.
Bagalakote: ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸ್ಥಾನವಿದೆ :ಶಾಸಕ ಸಿದ್ದು ಸವದಿ!
ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಪ್ರದೋಶ್ ಮತ್ತು ವಿನಯ್ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ, ಇನ್ನೂ ಹಲವು ನಟಿಯರಿಗೆ ಮೆಸೇಜ್ ಕಳುಹಿಸಿದ್ದ ಅನ್ನೋ ಮಾತು ಉಲ್ಲೇಖವಾಗಿದೆ.
ರೇಣುಕಾಸ್ವಾಮಿ ಮೊಬೈಲ್ ನಲ್ಲಿ ನಾವು ರಾಗಿಣಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ಅಶ್ಲೀಲ ಮಸೇಜ್ ಕಳುಹಿಸಿದ್ದನ್ನು ನಾವು ನೋಡಿದ್ದೇವೆ ಎಂದು ಪೊಲೀಸರಿಗೆ ಆರೋಪಿಗಳು ಹೇಳಿದ್ದಾರೆ. ಅವರ ಮಾತುಗಳನ್ನು ಚಾರ್ಜ್ಶೀಟ್ನಲ್ಲೂ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.