ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಜಯಬೇರಿ ಬಿಜೆಪಿ ಭಾರಿಸಬೇಕು. ರಾಜ್ಯದಲ್ಲೂ ಬಿಜೆಪಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಬೇಕು. ಮೂರನೇ ಬಾರಿಗೆ ಪ್ರಧಾನಿ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು. ಪಕ್ಷದಲ್ಲಿ ಹಿರಿಯರಿದ್ದರೂ ಸಹ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ.
ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ನಮ್ಮ ರಾಷ್ಟ್ರೀಯ ನಾಯಕರ ತೀರ್ಮಾನ. ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಎಲ್ಲಾ ಶಾಸಕರುಗಳು ಭಾಗವಹಿಸುತ್ತಾರೆ. ಶಾಸಕಾಂಗ ಪಕ್ಷದ ಸಭೆಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬರಲಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು.