ನವದೆಹಲಿ: ಚುನಾವಣೆ ಹೊತ್ತಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಆಘಾತ ಎದುರಾಗಿದೆ. ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಆಪ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಸಿದ್ದಾರೆ. ತಮ್ಮ ರಾಜೀನಾಮೆಯನ್ನು ದೆಹಲಿಯ ಸರ್ಕಾರದ ಮಂತ್ರಿ ಮಂಡಳಿಗೆ ಸಲ್ಲಿಸಿದ್ದು, ಮುಖ್ಯಮಂತ್ರಿ ಅತಿಶಿ ಗೆಹ್ಲೋಟ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ದೆಹಲಿಯ ಜನರಿಗೆ ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ!
ಯಮುನಾ ನದಿ ಶುಚಿಗೊಳಿಸುವಲ್ಲಿ ವಿಫಲವಾಗಿರುವುದರ ಕುರಿತು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ರ ಹೊಸ ಅಧಿಕೃತ ಬಂಗಲೆಯ ಶೀಶ್ ಮಹಲ್ ವಿಚಾರದಲ್ಲಿ ಹಲವಾರು ಮುಜುಗರದ ಅಂಶಗಳಿವೆ. ಇದು ಸಾಮಾನ್ಯ ಜನರ ಪಕ್ಷವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಏನು ಉತ್ತರಿಸುವುದು ಎಂದು ಉಲ್ಲೇಖಿಸಿದ್ದಾರೆ. ಫೆಬ್ರವರಿಯಲ್ಲಿ ದೆಹಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಗೂ ಮುಂಚಿತವಾಗಿ ಗಹ್ಲೋಟ್ ಅವರ ರಾಜೀನಾಮೆ ಆಮ್ ಆದ್ಮಿ ಪಾರ್ಟಿಗೆ ಹಿನ್ನಡೆಯಾಗಿದೆ.