ಬೆಳಗಾವಿ: ಪರಿಶಿಷ್ಟ ಜಾತಿಯವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಇರೋದು ಕರ್ನಾಟಕದಲ್ಲಿ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಸಿಎಂ ಅಂಕಿ ಅಂಶ ಸಮೇತ ಉತ್ತರಿಸಿದರು. ಗಣಿಗಾರಿಕೆಗೆ ತೆರಿಗೆ ಪರಿಷ್ಕರಣೆ ಮಾಡಿದ್ದೇವೆ. ಅದರ ಪ್ರಕಾರ 4,700 ಕೋಟಿ ರೂ. ಹೆಚ್ಚುವರಿ ಆದಾಯ ಬರುತ್ತದೆ. ಶಾಸಕ ರಾಜು ಕಾಗೆ ಅವರು ಕೇಳಿದ್ದು, ಹೆಚ್ಚುವರಿ ಅನುದಾನ ಕೊಡಿ ಅಂತ. ಅದನ್ನ ಕೊಡೋಕೆ ಹೇಳಿದ್ದೇನೆ ಎಂದು ತಿಳಿಸಿದರು.
ದಿನಾ ಒಂದು ಗ್ಲಾಸ್ ಈ ನೀರನ್ನು ಕುಡಿಯಿರಿ ಸಾಕು: ಬಲೂನ್ ತರ ಇರೋ ಹೊಟ್ಟೆ ಬೇಗ ಕರಗುತ್ತೆ!
SCSP-TSP ಯೋಜನೆ ಹಣ ಬಿಜೆಪಿ ಅವಧಿಯಲ್ಲಿ ಕಡಿಮೆ ಮಾಡಿದ್ದರು. ನಾವು ಈ ಬಾರಿ 39,000 ಕೋಟಿ ರೂ. ಇಟ್ಟಿದ್ದೇವೆ. ಬಿಜೆಪಿ ಅಧಿಕಾರ ಮಾಡ್ತಿರೋ ಬೇರೆ ರಾಜ್ಯಗಳಲ್ಲಿ SCSP-TSP ಕಾಯ್ದೆಯೇ ಇಲ್ಲ. ಇಡೀ ದೇಶದಲ್ಲಿ ಕರ್ನಾಟಕ, ಆಂಧ್ರ, ತೆಲಂಗಾಣ ಬಿಟ್ಟು ಇನ್ಯಾವುದೇ ರಾಜ್ಯದಲ್ಲಿ ಈ ಕಾಯ್ದೆ ಇಲ್ಲ. ಅಲ್ಲದೇ ಪರಿಶಿಷ್ಟ ಜಾತಿಯವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಇರೋದು ಕರ್ನಾಟಕದಲ್ಲಿ ಮಾತ್ರ ಎಂದು ಸ್ಪಷ್ಟನೆ ನೀಡಿದರು. ಸಿಎಂ ಉತ್ತರಕ್ಕೆ ವಿಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು.