ಬೆಂಗಳೂರು:- ನಟ ಚೇತನ್ ಅಹಿಂಸಾ ಅವರು, ಭಾರತ ತಂಡ ವಿಶ್ವಕಪ್ ಫೈನಲ್ ನಲ್ಲಿ ಆಘಾತಕಾರಿ ಸೋಲು ಅನುಭವಿಸಿದ ಬೆನ್ನಲ್ಲೇ ಭಾರತ ತಂಡದಲ್ಲಿ ಮೀಸಲಾತಿ ಅಗತ್ಯವಿದೆ’ ಎನ್ನುವುದನ್ನು ಪುನರುಚ್ಚರಿಸಿದ್ದಾರೆ.
ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು’ ಎಂದು ನಟ ಚೇತನ್ ಅಹಿಂಸಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
I repeat, India needs reservations in cricket
If India had cricket reservations, India would’ve easily won this #WorldCup
ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಅಗತ್ಯವಿದೆ
ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 19, 2023
ಪೋಸ್ಟ್ ಗೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಹಲವರು ಪ್ರತಿಕ್ರಿಯೆಗಳನ್ನೂ ನೀಡಿದ್ದಾರೆ. ಹಿಂದೆಯೂ ಟೀಮ್ ಇಂಡಿಯಾದಲ್ಲಿ ಮೀಸಲಾತಿ ಅಗತ್ಯವಿದೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರದ ಕುರಿತು ಮಾಧ್ಯಮಗಳಲ್ಲಿ ಭಾರಿ ಚರ್ಚೆಗಳೂ ನಡೆದಿದ್ದವು.