ಬೆಂಗಳೂರು: ನೇರಳೆ ಮಾರ್ಗದಲ್ಲಿ (Purple Line) ಕೆಲಕಾಲ ವ್ಯತ್ಯಯವಾಗಿದ್ದ ಮೆಟ್ರೋ ಸಂಚಾರ ಮತ್ತೆ ಪುನರ್ ಆರಂಭವಾಗಿದೆ.
ಎಂಜಿ ರೋಡ್- ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಕರೆಂಟ್ ಸಮಸ್ಯೆಯಿಂದ ಕೆಲ ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿತ್ತು.
ಅಂತೆಯೇ ಸಮಸ್ಯೆ ಪರಿಹರಿಸಲಾಗಿದ್ದು, ಎಂಜಿ ರೋಡ್ ಮತ್ತು ಚಲ್ಲಘಟ್ಟ ನಡುವೆ ಬೈಯಪ್ಪನಹಳ್ಳಿ ಮತ್ತು ವೈಟ್ಫೀಲ್ಡ್ (ಕಾಡುಗೋಡಿ) ನಡುವೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬೆಳಿಗ್ಗೆ 11.00 ಗಂಟೆಯಿಂದ ರೈಲು ಸೇವೆಗಳು ಎಂದಿನಂತೆ ಪುನರ್ ಆರಂಭಿಸಲಾಗಿದೆ.