ಹುಬ್ಬಳ್ಳಿ: – ಹುಬ್ಬಳ್ಳಿಬಧಾರವಾಡ ಅವಳಿನಗರ ತ್ಯಾಜ್ಯ ನಿರ್ವಹಣೆ ಕುರಿತು ಇಂದು ಧಾರವಾಡದಲ್ಲಿ ನಿವೃತ್ತ ನ್ಯಾಯಾಧೀಶರು ಹಾಗೂ ಉಪ ಲೋಕಾಯುಕ್ತರಿಂದ ಅಧಿಕಾರಿಗಳ ಸಭೆ ಜರುಗಿತು. ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಸಭೆ ಜರುಗಿಸಲಾಗಿದ್ದು, ನಿವೃತ್ತ ನ್ಯಾಯಾಧೀಶರು ಹಾಗೂ ಉಪಲೋಕಾಯುಕ್ತರು ಆಗಿರುವ ಸುಭಾಷ ಆಡಿ ಅವರು ತ್ಯಾಜ್ಯ ನಿರ್ವಹಣೆಯ ಕುರಿತು ಅಧಿಕಾರಿಗಳಿಂದ ಸಭೆಯಲ್ಲಿ ಮಾಹಿತಿ ಪಡೆದುಕೊಂಡರು.
ಘನತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹಾಗೂ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈಗಾಗಲೇ ಪ್ಲಾಸ್ಟಿಕ್ ನಿಷೇಧವಾದರೂ ಸಹ ಎತೆಚ್ಚವಾಗಿ ಪ್ಲಾಸ್ಟಿಕ್ ಬಳಕೆ ಆಗುತ್ತಿದ್ದು, ಪ್ಲಾಸ್ಟಿಕ್ ತಡೆಗಟ್ಟುವಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಧೀಶರು ಅಧಿಕಾರಗಳನ್ನು ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿ ಧಾರವಾಡದ ಮಹಾನಗರ ಪಾಲಿಕೆಯ ಎಲ್ಲ ಅಧಿಕಾರಿಗಳಿಗೆ ತ್ಯಾಜ್ಯ ನಿರ್ವಹಣೆ ವ್ಯವಸ್ಥಿತವಾಗಿ ನಡೆಯಬೇಕು, ಪ್ಲಾಸ್ಟಿಕ್ ತಡೆಗಟ್ಡುವಲ್ಲಿ ಅಗತ್ಯಕ್ರಮವಹಿಸಿ ಎಂದು ಖಡಕ್ ಸೂಚನೆ ನೀಡಿದರು.