ಧಾರವಾಡ:- KIADB ಡಬಲ್ ಪೇಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರನ್ನು ಇಡಿ ವಶಕ್ಕೆ ಪಡೆಯಲಾಗಿದೆ.
ರಾಷ್ಟ್ರಪತಿ ಅಂಗಳ ತಲುಪಿದ ಮುಡಾ ಕೇಸ್: ಸಿಎಂ ಮುಂದಿನ ದಾರಿ ಮತ್ತಷ್ಟು ಕಠಿಣ!?
ವಿ.ಡಿ. ಸಜ್ಜನ್ ಹಾಗೂ ಕೆಐಎಡಿಬಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡ್ತಿದ್ದ ಅಶ್ಫಾಕ್ ದುಂಡಸಿ ಇಬ್ಬರನ್ನು ಇಡಿ ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಿದ್ದ ಇಡಿ ತಂಡ, ಅನೇಕ ದಾಖಲೆ ಪತ್ರ ವಶಕ್ಕೆ ಪಡೆದು ಪರಿಶೀಲನೆ ನಡೆಸಿತ್ತು. ಅದರಂತೆ ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಕರೆದೊಯ್ಯಲಾಗಿದೆ
ಕೆಐಎಡಿಬಿ ಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು.
ಅದರಲ್ಲಿ ಸಜ್ಜನ್ ಮೊದಲನೇ ಆರೋಪಿ ಆಗಿ, ಜೈಲು ಸೇರಿದ್ದರು. ಡಬಲ್ ಪೇಮೆಂಟ್ ಕುರಿತು ಸಿಐಡಿ ತನಿಖೆಯ ಚಾರ್ಜ್ ಶೀಟ್ನಲ್ಲಿ ಒಂದೇ ದಿನದಲ್ಲಿ 30 ಕೋಟಿ ರೂಪಾಯಿ ಹಣ ವರ್ಗಾವಣೆ ಬಗ್ಗೆ ಆರೋಪಿಸಲಾಗಿತ್ತು.
ಇದೇ ವೇಳೆ ಸಿಐಡಿ ತನಿಖೆಯಲ್ಲಿ ಸಾಕಷ್ಟು ಲೋಪಗಳಾಗಿವೆ ಎನ್ನುವ ಆರೋಪವೂ ಕೇಳಿ ಬಂದಿತ್ತು.