ಹಾಸನ: ರೇವಣ್ಣ ಅವರ ಕುಟುಂಬ ಮುಗಿಸುವ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂಎಲ್ಸಿ ಸೂರಜ್ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ರೇವಣ್ಣ ಅವರ ಕುಟುಂಬ ಮುಗಿಸುವ ಅಜೆಂಡಾ ಇಟ್ಟುಕೊಂಡಿದ್ದಾರೆ. ರೇವಣ್ಣ ಅವರನ್ನು ಅರೆಸ್ಟ್ ಮಾಡಿಸಿದ್ರು, ನನ್ನ ಮೇಲೂ ಕೇಸ್ ಹಾಕಿಸಿದ್ರು.
ನಮ್ಮ ತಾಯಿಯವರ ಮೇಲೂ ಕೇಸ್ ಹಾಕಿ ಬಂಧಿಸುವ ಯತ್ನ ಮಾಡಿದ್ದರು. ಭವಾನಿ ರೇವಣ್ಣ ಭಯೋತ್ಪಾದಕರಾ? 50, 60 ಲಕ್ಷ ರೂ. ಖರ್ಚು ಮಾಡಿಸಿ ಸುಪ್ರೀಂಕೋರ್ಟ್ ತನಕ ಹೋಗಿ ವಾದ ಮಾಡಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
SBI ATM Franchise: ಈ ದಾಖಲೆಗಳು ಇದ್ರೆ ಸಾಕು.. ಪ್ರತಿ ತಿಂಗಳು 60 ಸಾವಿರ ರೂ.ವರೆಗೆ ಸಂಪಾದಿಸಬಹುದು..!
ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಸಾಲಮನ್ನಾ ಮಾಡಿದ್ದಾರೆ. ನೀರಾವರಿ ಯೋಜನೆಗಳು, ಆರೋಗ್ಯ ಕೇಂದ್ರಗಳು, ಮೆಡಿಕಲ್ ಕಾಲೇಜು, ರಸ್ತೆಗಳನ್ನು ಮಾಡಿಸಿದ್ದಾರೆ. ರೈತರಿಗೆ ಶಾಶ್ವತವಾಗಿ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಿದ್ದಾರೆ.
ನಮ್ಮ ತಂದೆ ಕೆಲಸ ಮಾಡುವುದನ್ನು ಹೇಳಿಕೊಟ್ಟಿದ್ದಾರೆ. ಮೈಕ್ ಹಿಡಿದು ಪ್ರಚಾರ ತಗೊಳೊದನ್ನು ಹೇಳಿಕೊಟ್ಟಿಲ್ಲ. ವಾರಕ್ಕೆ ಒಂದು ದಿನ ಪ್ರೆಸ್ಮೀಟ್ ಮಾಡಿ ಪ್ರಚಾರ ತಗೊಳೊದಲ್ಲ ಎಂದು ಕಿಡಿಕಾರಿದ್ದಾರೆ.