ಮೈಸೂರು:– ಪುತ್ರ ಪ್ರಜ್ವಲ್ ಹೆಸರಲ್ಲಿ ಚಾಮುಂಡೇಶ್ವರಿಗೆ ಎಚ್ಡಿ ರೇವಣ್ಣ ಅರ್ಚನೆ ಮಾಡಿಸಿದ್ದಾರೆ.
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನದ ಬೆಲೆ ಸತತ ಇಳಿಕೆ.. ಇಲ್ಲಿದೆ ಇವತ್ತಿನ ದರಪಟ್ಟಿ..!
ನಿನ್ನೆ ಜೈಲಿನಿಂದ ನೇರವಾಗಿ ದೇವೇಗೌಡ್ರ ನಿವಾಸಕ್ಕೆ ಆಗಮಿಸಿದ ರೇವಣ್ಣ ಮನೆಯಲ್ಲಿ ಪೂಜೆ ಮಾಡಿದರು. ಬಳಿಕ ಬಸವನಗುರಿಯಲ್ಲಿರುವ ಆಂಜನೇಯಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತದನಂತರ ಬನಶಂಕರಿಯ ತಮ್ಮ ನಿವಾಸಕ್ಕೆ ಆಗಮಿಸಿ ಅಲ್ಲಿಗೂ ಸಹ ದೇವರ ಪ್ರಾರ್ಥನೆ ಮಾಡಿದರು. ಬಳಿಕ ಅಲ್ಲಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡಿನ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇನ್ನು ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲೂ ಸಹ ವಿಶೇಷ ಪೂಜೆ ಮಾಡಿಸಿದರು. ಕುಟುಂಬದ ಪ್ರತಿಯೊಬ್ಬರ ಹೆಸರು ಹಾಗೂ ನಕ್ಷತ್ರ ಹೇಳಿ ಅರ್ಚನೆ ಮಾಡಿಸಿದರು. ಬಳಿಕ ದೇವಾಲಯದಲ್ಲಿ ಸುಮಾರು ಹತ್ತು ನಿಮಿಷಗಳ ಕಾಲ ಏಕಾಂಗಿಯಾಗಿ ಕುಳಿತು ದೇವಿಗೆ ಪ್ರಾರ್ಥನೆ ಮಾಡಿದರು ಎಂದು ಹೇಳಲಾಗಿದೆ.