ಹೈದರಾಬಾದ್:- ರೇವಂತ್ ರೆಡ್ಡಿ ಅವರು ತೆಲಂಗಾಣ 2ನೆ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು.
ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೊಡಂಗಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರಿಗೆ ಮುಖ್ಯಮಂತ್ರಿಯಾಗಿ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಪ್ರಮಾಣವಚನ ಬೋಧಿಸಿದರು. ಇದೆ ವೇಳೆ, ತೆಲಂಗಾಣದ ಉಪ ಮುಖ್ತಮಂತ್ರಿಯಾಗಿ (ಡಿಸಿಎಂ) ಮಲ್ಲು ಭಟ್ಟಿ ವಿಕ್ರಮಾರ್ಕ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕಾಂಗ್ರೆಸ್ನ ಎಲ್ಲಾ ಪ್ರಮುಖ ನಾಯಕರು ಆಗಮಿಸಿದ್ದರಿಂದ ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು. ಬೆಳಗ್ಗೆಯಿಂದಲೇ ಕಾಂಗ್ರೆಸ್ ಕಾರ್ಯಕರ್ತರು ಕ್ರೀಡಾಂಗಣಕ್ಕೆ ಬರಲಾರಂಭಿಸಿದ್ರು. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಅತಿಥಿಗಳನ್ನು ರಂಜಿಸಲು 500 ಕಲಾವಿದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂದು ಮಧ್ಯಾಹ್ನ ಒಂದು ಗಂಟೆ ನಾಲ್ಕು ನಿಮಿಷಕ್ಕೆ ರೇವಂತ್ ರೆಡ್ಡಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.