ಮಂಡ್ಯ: ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದಾರೆ. ಮೈಸೂರಿಗೆ ತೆರಳುತ್ತಿದ್ದ ವೇಳೆ ಮಂಡ್ಯದ ಮದ್ದೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಕಂದಾಯ ಸಚಿವರ ದಿಢೀರ್ ಭೇಟಿ ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿ ಆಗಿದ್ದಾರೆ. ಇದೇ ವೇಳೆ ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ. ರೈತರೊಬ್ಬರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ದೂರು ನೀಡಲಾಗಿದೆ.
ಇನ್ನು ಸಚಿವ ಕೃಷ್ಣಭೈರೇಗೌಡ ಜನರ ಎದುರೇ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. ಸರ್ಕಾರಿ ಜಾಗ ಸರ್ವೇ ಮಾಡಿಕೊಡಲು ಎಷ್ಟು ದಿನ ಬೇಕು? ನೆಪ ಹೇಳಿಕೊಂಡು ಕಾಲ ಕಳೆಯಲು ಬಂದಿದ್ದೀರಾ ಇಲ್ಲಿ. ಒಂದೊಂದು ಕೆಲಸ ಮಾಡಿಸಲು ನಾನೇ ಬರಬೇಕು? ಎಂದು ಅಧಿಕಾರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.