ಬೆಂಗಳೂರು:- ಕರ್ನಾಟಕದ ಪ್ರವಾಸೋದ್ಯಮ ಉತ್ತೇಜಿಸಲು ಶೀಘ್ರ ಪರಿಷ್ಕೃತ ನೀತಿ ಪ್ರಕಟಿಸಲಾಗುವುದು ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಮ್ಮ ರಾಜ್ಯದಲ್ಲಿರುವ ಸ್ಮಾರಕಗಳನ್ನು ಸಂರಕ್ಷಿಸಲು ವಿಶೇಷ ಗಮನ ನೀಡಿರುವುದಾಗಿ ಹೇಳಿದ ಅವರು, ಲಲಿತ ಮಹಲ್ ಪ್ಯಾಲೇಸ್ ನವೀಕರಣ, ಮೈಸೂರಿನ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ನವೀಕರಿಸಿ ಸಂರಕ್ಷಿಸಲು ನಿರ್ಧರಿಸಲಾಗಿದೆ. ಲಲಿತ ಮಹಲ್ ಹೋಟೆಲ್ ಕಟ್ಟಡ ದುರ್ಬಲವಾಗಿದ್ದು, ಈ ಹಿನ್ನೆಲೆಯಲ್ಲಿ ಅದನ್ನು ಸಂರಕ್ಷಿಸಲು ತುರ್ತಾಗಿ ನವೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕಿದೆ ಎಂದ ಅವರು, ಈ ಹಿನ್ನೆಲೆಯಲ್ಲಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಕಟ್ಟಡದ ನವೀಕರಣದ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಳ್ಳುವುದಿಲ್ಲ. ಹೀಗಾಗಿ ಈ ಕಾರ್ಯವನ್ನು ಖಾಸಗಿಯವರಿಗೆ ವಹಿಸಿ ಕೊಡಲು ತೀರ್ಮಾನಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಕನ್ನಡಿಗರ ಹೆಮ್ಮೆಯ ರಾಷ್ಟ್ರಕೂಟ ದೊರೆ ಅಮೋಘವರ್ಷ ನೃಪತುಂಗನ ಕೋಟೆಯನ್ನು ಸಂರಕ್ಷಣೆ ಹಾಗೂ ಅಭಿವೃದ್ಧಿಪಡಿಸಲು ನಿರ್ಧರಿಸಿದ್ದು, ಮಳಖೇಡದಲ್ಲಿರುವ ಈ ಕೋಟೆಯನ್ನು ಒಂದು ಹಂತದಲ್ಲಿ ಸಂರಕ್ಷಿಸುವ ಕೆಲಸವಾಗಿದ್ದರೂ ಅದನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ತೀಮಾನಿಸಲಾಗಿದೆ ಎಂದು ತಿಳಿಸಿದರು.

ಸ್ಮಾರಕಗಳನ್ನು ಸಂರಕ್ಷಿಸುವ ಯೋಜನೆಗೆ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆ ಇತ್ತೀಚೆಗೆ ತಾವು ಕೈಗೊಂಡ ಮೂರು ದಿನಗಳ ಪ್ರವಾಸದ ವಿವರ ನೀಡಿದ ಅವರು, ನೃಪತುಂಗನ ಕೋಟೆ ಇರುವ ಮಳಖೇಡಕ್ಕೆ ಭೇಟಿ ನೀಡಿದ ಬಗ್ಗೆ ವಿವರಿಸಿದರು. ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮದ ಮೊದಲ ಹಂತದ ಕಾರ್ಯಕ್ರಮ ಪೂರ್ಣಗೊಂಡಿದೆ. ಈ ಸ್ಮಾರಕಗಳ ದರ್ಶನ, ಸಂರಕ್ಷಣೆಗಾಗಿ ಈ ಸ್ಮಾರಕಗಳ ದರ್ಶನ, ಸಂರಕ್ಷಣೆಗಾಗಿ ಪ್ರವಾಸದ ಸಂದರ್ಭದಲ್ಲಿ ಬಸವನಾಡು ಕಲ್ಯಾಣ ಕರ್ನಾಟಕದ ಹಲವು ಹತ್ತು ಸ್ಮಾರಕಗಳ ದರ್ಶನ ಪಡೆಯಲಾಗಿದೆ. ಈ ಸಂದರ್ಭದಲ್ಲಿ ಭೇಟಿ ನೀಡಿದ ಬಹುತೇಕ ಸ್ಮಾರಕಗಳನ್ನು ಆಸಕ್ತ, ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ ಎಂದು ಮಾಹಿತಿ ನೀಡಿದರು.