ಬೆಂಗಳೂರಿನ ಪ್ರತಿಷ್ಠಿತ ರೇವಾ ವಿಶ್ವವಿದ್ಯಾಲಯದಲ್ಲಿ ಇಂದು 9 ನೇ ಘಟಿಕೋತ್ಸವ ಸಮಾರಂಭ ಬಹಳ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಯುಜಿಸಿ ಅಧ್ಯಕ್ಷ ಪ್ರೊ.ಎಂ ಜಗದೀಶ್ ಕುಮಾರ್ ಭಾಗಿಯಾಗಿದ್ದರು. ರೇವಾ ವಿಶ್ವವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ವಿಧ್ಯಾಭ್ಯಾಸ ಪಡೆದ ಒಟ್ಟು 4,537 ವಿದ್ಯಾರ್ಥಿಗಳಲ್ಲಿ 3,311 ಪದವಿಪೂರ್ವ, 1,156 ಸ್ನಾತಕೋತ್ತರ ಮತ್ತು 70 ಮಂದಿ ಡಾಕ್ಟರೇಟ್ ಪದವಿಗಳನ್ನು ಪಡೆದುಕೊಂಡರು.
ಎಚ್ಚರ.. ಎಚ್ಚರ.. ಶನಿವಾರ ಈ ಕೆಲಸಗಳನ್ನು ಮಾಡಿದ್ರೆ ಶನಿ ದೋಷ ಬರೋದು ಗ್ಯಾರಂಟಿ!
ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ 66 ವಿದ್ಯಾರ್ಥಿಗಳು ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದರು. ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಯುಜಿಸಿ ಅಧ್ಯಕ್ಷ ಪ್ರೊ. ಜಗದೀಶ್ ಕುಮಾರ್ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದ ಬಗ್ಗೆ ಕಿವಿಮಾತು ಹೇಳಿದರು. ರೇವಾ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿ ಡಾ.ಪಿ ಶ್ಯಾಮ ರಾಜು ಅಧ್ಯಕ್ಷತೆ ವಹಿಸಿದ್ದರು. ಸಮ ಕುಲಾಧಿಪತಿ ಉಮೇಶ್ ಉಪಸ್ಥಿತರಿದ್ದರು.