ಬೆಂಗಳೂರು: ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಣೆ ಹಿನ್ನೆಲೆ ಪರ್ಯಾಯ ವ್ಯವಸ್ಥೆ ಬಗ್ಗೆ ಇಂದಿನ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ.ಅನ್ನಭಾಗ್ಯ ಯೋಜನೆ ಕುರಿತು ಇಂದು (ಜೂ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ನಡೆಯುವ ಸಭೆಯಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಿಎಸ್ ವಂದಿತಾ ಶರ್ಮಾ ಆಹಾರ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಬೇರೆ ಯಾವ ರಾಜ್ಯದಿಂದ ಎಷ್ಟು ಪ್ರಮಾಣದಲ್ಲಿ ಅಕ್ಕಿ ಸಿಗಲಿದೆ? ಯಾವ ದರದಲ್ಲಿ ಅಕ್ಕಿ ಲಭ್ಯವಿದೆ ಎಂಬುವುದರ ವಿಚಾರವಾಗಿ ಚರ್ಚೆ ನಡೆಯಲಿದೆ.

