ಗದಗ: ಗದಗ ಜಿಲ್ಲೆಯ ಹಲವೆಡೆ ಬಡವರ ಹೊಟ್ಟೆ ಸೇರಬೇಕಾದ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗ್ತಿದೆ ಅನ್ನೋ ಅರೋಪಗಳ ನಡುವೆ ಇದೀಗ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆಯನ್ನ ನಡೆಸಿ ಗದಗನ ನರಸಾಪೂರ ಇಂಡಸ್ಟ್ರಿಯಲ್ ಎಸ್ಟೇಟ್’ನ ಗೋಡೌನ ಮೇಲೆ ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ.
ಟೊಮೆಟೊ ಸಿಪ್ಪೆ ವೇಸ್ಟ್ ಅಂತ ಬಿಸಾಡಬೇಡಿ: ಇದರಲ್ಲಿ ಅಡಗಿದೆ ಆರೋಗ್ಯದ ಗುಟ್ಟು.!
ಒಟ್ಟು 52 ಚೀಲಗಳಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನ ತುಂಬಿಸಿಟ್ಟಿದ್ದರು ದಂಧೆಕೋರರು. ಜೊತೆಗೆ ಅನ್ನಭಾಗ್ಯ ಅಕ್ಕಿಯನ್ನು ತುಂಬಲು ನಂದಿ ಬ್ರಾಂಡ್ ಹೆಸರಿನ ಹುರಿಕಡಲೆ ಅಂತಾ ಪ್ರಿಂಟ್ ಆಗಿರೋ ಚೀಲಗಳನ್ನ ಬಳಸಲಾಗಿದೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಅಕ್ಕಿ ಸಂಗ್ರಹ ಮಾಡಿದವರ ಪತ್ತೆಗೆ ಮುಂದಾಗಿದ್ದಾರೆ.