ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರು ತಂಡಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.
Muda Scam: CM ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್, ನವೆಂಬರ್ 26ಕ್ಕೆ ಸಿಬಿಐ ತನಿಖೆ ಭವಿಷ್ಯ!
ನವೆಂಬರ್ 22ನೇ ತಾರೀಕಿನಿಂದ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ಟ್ರೋಪಿ ಗೆದ್ದಿತ್ತು. 2016 ರಿಂದಲೂ ಟೀಮ್ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲುತ್ತಲೇ ಬಂದಿದೆ. ಟೀಮ್ ಇಂಡಿಯಾ ಈಗಿರೋ ಪರಿಸ್ಥಿತಿ ನೋಡಿದ್ರೆ ಗೆಲ್ಲೋದು ಕಷ್ಟವಾಗಿದೆ. ಆಸೀಸ್ ಸರಣಿಗೆ ಆಟಗಾರರನ್ನು ಸಜ್ಜುಗೊಳಿಸಲು ಸಿದ್ಧತೆ ಆರಂಭಿಸಿರೋ ಬಿಸಿಸಿಐಗೆ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರದ್ದೇ ದೊಡ್ಡ ಚಿಂತೆಯಾಗಿದೆ
ಭಾರತ ಇದೇ ತಿಂಗಳು ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪಂತ್ ಬಗ್ಗೆ ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ. ಇದು ಕ್ಯಾಪ್ಟನ್ ರೋಹಿತ್ ಶರ್ಮಾ ಅವರು ಚಿಂತಿಸುವಂತೆ ಮಾಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದೊಡ್ಡ ಹಿನ್ನಡೆ ಅನುಭವಿಸಿತು. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮೊಣಕಾಲಿನ ಗಂಭೀರ ಗಾಯಕ್ಕೆ ಒಳಗಾಗಿದ್ದು, ಇದರ ಮಧ್ಯೆಯೂ ಇಡೀ ಸರಣಿ ಆಡಿದ್ರು. ಆದರೀಗ, ಇವರ ಮೊಣಕಾಲಿನ ಗಾಯ ತೀವ್ರವಾಗಿ ಪಂತ್ ಅವರನ್ನು ಬಾದಿಸುತ್ತಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುವುದು ಡೌಟ್ ಆಗಿದೆ.
ರಿಷಬ್ ಪಂತ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದರು. 37ನೇ ಓವರ್ನ ಕೊನೆಯ ಎಸೆತದಲ್ಲಿ ರವೀಂದ್ರ ಜಡೇಜಾ ಎಸೆದ ಚೆಂಡು ನೇರವಾಗಿ ಪಂತ್ ಮೊಣಕಾಲಿಗೆ ಬಿತ್ತು. ಚೆಂಡು ಬಡಿದ ರಭಸಕ್ಕೆ ಪಂತ್ ನೋವಿನಿಂದ ಮೈದಾನದಲ್ಲೇ ಪರದಾಡಿದ್ರು. ತಕ್ಷಣ ಮೈದಾನಕ್ಕೆ ಬಂದ ಫಿಸಿಯೋ ಪಂತ್ಗೆ ಪ್ರಥಮ ಚಿಕಿತ್ಸೆ ನೀಡಿದ್ರು. ಆದರೆ ಚಿಕಿತ್ಸೆಯಿಂದ ಪಂತ್ ಚೇತರಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.