ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಮೂಡಿಸಿ ಹಲವಾರು ಕನ್ನಡ ಶಾಲೆಗಳ ಉಳಿವಿಗೆ ಕಾರಣನಾಗಿರುವ ನಟ ನಿರ್ದೇಶಕ ರಿಷಬ್ ಶೆಟ್ಟಿ ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೇ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿ (Keradi) ಸರ್ಕಾರಿ ಕನ್ನಡ ಶಾಲೆಯನ್ನು (School) ದತ್ತು ಪಡೆದಿದ್ದಾರೆ
ಕೆರಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗೆ ಭೇಟಿನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಊರ ಪ್ರಮುಖರು,ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯ ದತ್ತು ರಿಷಬ್ ಶೆಟ್ಟಿಯವರನ್ನು ಅಭಿನಂದಿಸಿದರು.
ರಿಷಬ್ ಸದ್ಯ ಕಾಂತಾರ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವಿವ್ಸ್ಯೂ ಪಡೆಯುತ್ತಿದ್ದು, ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದಾರೆ.