ರಾಕಿಂಗ್ ಸ್ಟಾರ್ ಯಶ್ ನಿನ್ನೆ ಬರ್ತಡೇ ಆಚರಿಸಿಕೊಂಡಿದ್ದಾರೆ. ಸಿಂಪಲ್ ಆಗಿ ಯಶ್ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಂಡಿದ್ದು ಯಶ್ ಬರ್ತಡೇ ಹಿನ್ನೆಲೆಯಲ್ಲಿ ಟಾಕ್ಸಿಕ್ ಸಿನಿಮಾದ ಗ್ಲಿಮ್ಸ್ ಬಿಡುಗಡೆ ಮಾಡಲಾಗಿದೆ. ಈ ಗ್ಲಿಮ್ಸ್ ನೋಡಿ ಪ್ರತಿಯೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ಅಂತೆಯೇ ನಟ ರಿಷಬ್ ಶೆಟ್ಟಿ ಕೂಡ ಗಿಮ್ಸ್ ಗೆ ಮೆಚ್ಚುಗೆ ಸೂಚಿಸಿದ್ದು ಅದನ್ನು ಶೇರ್ ಮಾಡಿ ಯಶ್ ಬರ್ತಡೇಗೆ ವಿಶ್ ಮಾಡಿದ್ದಾರೆ.
ಯಶ್ ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿ ವಿಶೇಷವಾಗಿ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಗ್ಲಿಂಪ್ಸ್ ನೋಡಿ ಬೆರಗುಗೊಳಿಸುವಂತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ತುಣುಕು ಶೇರ್ ಮಾಡಿ, ಹುಟ್ಟುಹಬ್ಬದ ಶುಭಾಶಯಗಳು ಯಶ್ ಸರ್ ಎಂದು ರಿಷಬ್ ಬರೆದುಕೊಂಡಿದ್ದಾರೆ.
ಗೋವಾದಲ್ಲಿ ಮಧ್ಯರಾತ್ರಿ ಯಶ್ ಕೇಕ್ ಕತ್ತರಿಸಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಪತ್ನಿ ರಾಧಿಕಾ ಮತ್ತು ಮಕ್ಕಳೊಂದಿಗೆ ಬರ್ತ್ಡೇ ಆಚರಿಸಿ ಯಶ್ ಖುಷಿಪಟ್ಟಿದ್ದಾರೆ. ನಟನ ಆಪ್ತ ಪಾನಿ ಪುರಿ ಕಿಟ್ಟಿ, KVN ಸಂಸ್ಥೆಯ ರೂವಾರಿ ವೆಂಕಟ್ ಸೇರಿದಂತೆ ಅನೇಕರು ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಯಶ್ ಗೆ ಶುಭಕೋರಿದ್ದಾರೆ.